Select Your Language

Notifications

webdunia
webdunia
webdunia
webdunia

ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ!?

ಕೊಡಗಿನಲ್ಲಿ  ಮದ್ಯ ಮಾರಾಟ ನಿಷೇಧ!?
ಮಡಿಕೇರಿ , ಗುರುವಾರ, 25 ಆಗಸ್ಟ್ 2022 (08:08 IST)
ಮಡಿಕೇರಿ : ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಮೇಲಾಟ, ಕಿತ್ತಾಟದ ನಡುವೆ ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.

ಕೊಡಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದು, 2 ಪಕ್ಷಗಳು ಪ್ರತಿಭಟನೆಯನ್ನು ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಾಳೆಯಿಂದ ಆ.27ರವರೆಗೆ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದ್ದು, ಈ 4 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಿದೆ.

ಘಟನೆಗೆ ಪೊಲೀಸ್ ಇಲಾಖೆ ವೈಫಲ್ಯ ಎಂದು ಆರೋಪಿಸಿ ಇದೇ 26ರಂದು ಕಾಂಗ್ರೆಸ್ ಪಕ್ಷದಿಂದ ಮಡಿಕೇರಿ ಚಲೋವನ್ನು ಹಮ್ಮಿಕೊಂಡಿತ್ತು. ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿತ್ತು. 

ಇದೆಲ್ಲಾ ರಾಜಕೀಯ ಮೇಲಾಟ ಕಿತ್ತಾಟದ ನಡುವೆ ಇದೀಗ ಕೊಡಗು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. 4 ದಿನಗಳ ಕಾಲ 144 ಸೆಕ್ಷನ್ ಹಾಕಲಾಗಿದ್ದು, ಎರಡು ಪಕ್ಷದವರಿಗೂ ಸಮಾವೇಶ ಹಾಗೂ ಪ್ರತಿಭಟನೆ ಮಾಡುವುದನ್ನು ನಿರ್ಬಂಧ ಮಾಡಲಾಗಿದೆ. ನಾಳೆಯಿಂದ ಆ. 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಸತೀಶ್ ಖಡಕ್ ಆದೇಶ ಕೊಟ್ಟಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ನೌಕಾಪಡೆಗೆ ಅಧಿಕೃತ ಸೇರ್ಪಡೆ : ವಿಕ್ರಾಂತ್ ವಿಶೇಷತೆ ಏನು?