Select Your Language

Notifications

webdunia
webdunia
webdunia
webdunia

ಪ್ರೌಢಶಾಲೆ ಹಂತದಲ್ಲೇ 'ಟೆಕ್ನಾಲಜಿ ಸ್ಕೂಲ್' ಶುರು: ಬೊಮ್ಮಾಯಿ

ಪ್ರೌಢಶಾಲೆ ಹಂತದಲ್ಲೇ 'ಟೆಕ್ನಾಲಜಿ ಸ್ಕೂಲ್' ಶುರು: ಬೊಮ್ಮಾಯಿ
ಬೆಂಗಳೂರು , ಬುಧವಾರ, 6 ಅಕ್ಟೋಬರ್ 2021 (13:37 IST)
ಬೆಂಗಳೂರು : ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡಬೇಕು. ಇದಕ್ಕಾಗಿ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು (ಟೆಕ್ನಾಲಜಿ ಸ್ಕೂಲ್ಸ್) ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Photo Courtesy: Google

ಐ.ಟಿ./ಬಿಟಿ ಇಲಾಖೆ ವತಿಯಿಂದ 'ಬಿಯಾಂಡ್ ಬೆಂಗಳೂರು' ಉಪಕ್ರಮದಡಿ ಮಂಗಳವಾರ ಏರ್ಪಡಿಸಿದ್ದ 'ನಾವೀನ್ಯತೆ ಮತ್ತು ಪರಿಣಾಮ' ('ಇನ್ನೊವೇಷನ್ ಅಂಡ್ ಇಂಪ್ಯಾಕ್ಟ್) ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿದ ಅವರು, ಹುಬ್ಬಳ್ಳಿ ವಲಯದಲ್ಲಿ ಹೊಸ ತಾಂತ್ರಿಕತೆಯ ಉದ್ಯಮದ ಬೆಳವಣಿಗೆಗೆ ತಕ್ಷಣದಿಂದಲೇ ಆದ್ಯತೆಯ ಮೇಲೆ ಕ್ರಮ ವಹಿಸಲಾಗುವುದು ಎಂದರು.
1960ರಷ್ಟು ಹಿಂದೆಯೇ ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಟೆಕ್ನಾಲಜಿ ಹೈಸ್ಕೂಲ್ ಇತ್ತು. ಆದರೆ ತದನಂತರದಲ್ಲಿ ಅದನ್ನು ಮುಚ್ಚಲಾಯಿತು, ಮಕ್ಕಳಲ್ಲಿ ಗ್ರಹಿಕೆ ಶಕ್ತಿ ಹೆಚ್ಚಾಗಿರುವುದರಿಂದ ಹೈಸ್ಕೂಲ್ ಮಟ್ಟದಲ್ಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡುವುದು ಮುಖ್ಯ. ಹೀಗಾಗಿ ಕೆಲವು ಪ್ರೌಢಶಾಲಾ ಹಂತದಲ್ಲಿ ಪ್ರತ್ಯೇಕ ಟೆಕ್ನಾಲಜಿ ಸ್ಕೂಲ್ ಗಳನ್ನು ಆರಂಭಿಸುವುದು ಸೂಕ್ತ ಎಂದು ಹೇಳಿದರು.
ಅಟಲ್ ಬಿಹಾರಿ ವಾಜಪೇಯಿ ಟಿಂಕರಿಂಗ್ ಲ್ಯಾಬ್ ಗಳನ್ನು ಮೇಲ್ದರ್ಜೆಗೇರಿಸಿ ಆ ಹಂತದಲ್ಲಿ ಸ್ವಲ್ಪ ಮಟ್ಟಿಗಾದರೂ ಕೃತಕ ಬುದ್ಧಿಮತ್ತೆಯನ್ನು (ಎಐ) ಅಳವಡಿಸುವ ಅಗತ್ಯವಿದೆ. 150 ಐಟಿಐ ಕಾಲೇಜುಗಳನ್ನು ಉನ್ನತ ದರ್ಜೆಗೇರಿಸಿರುವಂತೆಯೇ ಪಾಲಿಟೆಕ್ನಿಕ್ ಕಾಲೇಜುಗಳನ್ನೂ ಉನ್ನತ ದರ್ಜೆಗೇರಿಸಬೇಕು ಎಂದು ಸಲಹೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಜನಸಾಮಾನ್ಯರಿಗೆ ಶಾಕ್ ಕೊಟ್ಟ ಸರ್ಕಾರ..!