Select Your Language

Notifications

webdunia
webdunia
webdunia
webdunia

ಕಾಲೇಜುಗಳ ಸುತ್ತಮುತ್ತ 144 ಸೆಕ್ಷನ್ ಜಾರಿ?

ಕಾಲೇಜುಗಳು
ರಜೆ ನೀಡಿದ್ದ ಕಾಲೇಜುಗಳು ಇಂದಿನಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆ ತುಮಕೂರು ಜಿಲ್ಲೆಯ ಎಲ್ಲಾ ಕಾಲೇಜುಗಳ ಸುತ್ತಮುತ್ತ 144 ಸೆಕ್ಷನ್ ಜಾರಿಯಾಗಿದೆ.
 
ಕಾಲೇಜಿನ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತುಮಕೂರು ಜಿಲ್ಲಾಧಿಕಾರಿ ವೈಎಸ್ ಪಾಟೀಲ್  ಆದೇಶ ನೀಡಿದ್ದಾರೆ. ಮುಂದಿನ ಆದೇಶದ ವರೆಗೆ 144 ಸೆಕ್ಷನ್ ಜಾರಿ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

 ಅಲ್ಲದೆ ಜಿಲ್ಲಾಡಳಿತ ಕೆಲ ಷರತ್ತುಗಳನ್ನ ವಿಧಿಸಿದೆ. ಗುರುತಿನ ಚೀಟಿ ಹೊಂದಿರುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಲಾಗಿದೆ. ಕಾಲೇಜು ಸುತ್ತಮುತ್ತ ಜನ ಗುಂಪುಗೂಡುವಂತಿಲ್ಲ. ನಿಷೇಧಾಜ್ಞೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಸುವಂತಿಲ್ಲ.

ಯಾವುದೇ ಮಾರಕಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನ ಹಿಡಿದು ಓಡಾಡುವಂತಿಲ್ಲ. ಯಾವುದೇ ಸಭೆ, ಬಹಿರಂಗ ಪ್ರಚಾರ ನಡೆಸುವಂತಿಲ್ಲ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ತುಮಕೂರು ಡಿಸಿ ವೈಎಸ್ ಪಾಟೀಲ್ ಆದೇಶ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭ