ತೀವ್ರ ಅನಾರೋಗ್ಯದ ಹಿನ್ನಲೆ ; ಅಧಿಕಾರದಿಂದ ಕೆಳಗಿಳಿಯಲು ನಿರ್ಧಾರ ಮಾಡಿದ ಗೋವಾ ಸಿಎಂ

Webdunia
ಶನಿವಾರ, 15 ಸೆಪ್ಟಂಬರ್ 2018 (06:58 IST)
ಪಣಜಿ : ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅಧಿಕಾರದಿಂದ ಕೆಳಗಿಳಿಯುವ ನಿರ್ಧಾರ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಶುಕ್ರವಾರ ಸಂಜೆ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರು ಈ ಹಿಂದೆ ವಿದೇಶದಲ್ಲಿ ಚಿಕಿತ್ಸೆ ಪಡೆದು ಮತ್ತೆ ಮುಖ್ಯಮಂತ್ರಿಯ ಕರ್ತವ್ಯ ನಿಭಾಯಿಸುತ್ತಿದ್ದರು. ಆದರೆ ಇದೀಗ ತೀವ್ರ ಜ್ವರದಿಂದ ಬಳುತ್ತಿರುವ ಪರಿಕ್ಕರ್ ಅವರನ್ನು ಕಾಂಡೋಲಿಮ್ ನಲ್ಲಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.


ಇದೀಗ ಅವರು ಅಧಿಕಾರದಲ್ಲಿ ಮುಂದುವರಿಯುವುದು ಸಾಧ್ಯವಿಲ್ಲ ಎಂದು ನಿರ್ಧರಿಸಿ ಅಲ್ಲಿಂದಲೇ ಬಿಜೆಪಿ ರಾಷ್ಟ್ರೀಯ ಮುಖಂಡರಿಗೆ ಮಾಹಿತಿ ನೀಡಿ ಮುಖ್ಯಮಂತ್ರಿ ಹುದ್ದೆಗೆ ಪಕ್ಷ ಬೇರೆ ಅಭ್ಯರ್ಥಿ ಹುಡುಕುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಈಗ ಗೋವಾಗೆ ಹೊಸ ಮುಖ್ಯಮಂತ್ರಿ ನೇಮಕ ಮಾಡಲು ಬಿಜೆಪಿ ದೆಹಲಿಯಿಂದ ಸಮಿತಿಯೊಂದನ್ನು ರಾಜ್ಯಕ್ಕೆ ಕಳಿಸಲಿದೆ ಎಂಬುದಾಗಿ ಕೂಡ  ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments