Publish Date: Wed, 17 Oct 2018 (11:21 IST)
Updated Date: Wed, 17 Oct 2018 (11:23 IST)
ಕಲಬುರಗಿ : ನ್ಯಾಯಾಲಯದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ರಸ್ತೆ ಮಧ್ಯದಲ್ಲಿ ವಿಧವೆಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ.
ಜೈಶಂಕರ್ ಎಂಬಾತನೇ ಈ ಕೃತ್ಯ ಎಸಗಿರುವ ಆರೋಪಿ. ಈತ ಯುವತಿಯ ಪಕ್ಕದ ಮನೆಯಲ್ಲಿ ವಾಸವಾಗಿದ್ದು, ಕೋರ್ಟ್ ಕೆಲಸ ಮುಗಿಸಿ ಮನೆಗೆ ಬರುವಾಗ ಮಹಿಳೆಯ ಕೈ ಹಿಡಿದು ಎಳೆದಾಡಿ ತನ್ನೊಂದಿಗೆ ಇರುವಂತೆ ಒತ್ತಾಯ ಮಾಡಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ವಿಚಾರವನ್ನು ತನ್ನ ಪೋಷಕರಿಗೆ ಆಕೆ ತಿಳಿಸಿದ ಕಾರಣ ಪೋಷಕರು ಜೈಶಂಕರ್ ಗೆ ಬುದ್ಧಿ ಹೇಳಲು ಹೋದಾಗ ಅವರ ಮೇಲೆ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾನೆ. ಆದಕಾರಣ ಯುವತಿ ಹಾಗೂ ಪೋಷಕರು ಜೈಶಂಕರ್ ವಿರುದ್ಧ ಆಳಂದ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ವಿಷಯ ಅರಿಯುತ್ತಿದ್ದಂತೆ ಜೈಶಂಕರ್ ಪರಾರಿಯಾಗಿದ್ದು, ಇದೀಗ ಆತನನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.