Publish Date: Fri, 20 Apr 2018 (16:38 IST)
Updated Date: Fri, 20 Apr 2018 (16:40 IST)
ಬೆಂಗಳೂರು : ನಟ ಶಶಿಕುಮಾರ್ ಅವರು ಇದೀಗ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣದಿಂದ ಕಾಂಗ್ರೆಸ್ ನ್ನು ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
ಗುರುವಾರ ತಮ್ಮ ಪದ್ಮನಾಭನಗರದ ನಿವಾಸದಲ್ಲಿ ಪಕ್ಷದ ಶಾಲು ಹೊದಿಸುವುದರ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಶಶಿಕುಮಾರ್ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕುಮಾರ್ ಅವರು,’ ಕಾಂಗ್ರೆಸ್ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಹೆಚ್ಚಾಗುತ್ತಿದೆ. ಅರ್ಹರಿಗೆ ಟಿಕೆಟ್ ನೀಡದೆ, ನಂಬಿಸಿ ಕತ್ತು ಕೊಯ್ಯುವ ಕೆಲಸ ನಡೆಯುತ್ತಿದೆ. ಯಾವುದೇ ಪಕ್ಷ ಈ ರೀತಿ ಮಾಡಬಾರದು. ನನ್ನ ಕ್ಷೇತ್ರದ ಜನ ಜೆಡಿಎಸ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಜನರ ಒತ್ತಡಕ್ಕೆ ಮಣಿದು ಮತ್ತು ಪಕ್ಷದ ವರ್ತನೆಯಿಂದ ಬೇಸತ್ತು ಜೆಡಿಎಸ್ ಸೇರ್ಪಡೆಗೊಂಡಿದ್ದೇನೆ. ಈ ಸಂಬಂಧ ಜೆಡಿಎಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದೇನೆ’ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ