ನವದೆಹಲಿ: ರಾಮಮಂದಿರ ನಿರ್ಮಾಣದ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
									
			
			 
 			
 
 			
					
			        							
								
																	ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಶಿ ತರೂರ್ ‘ಒಬ್ಬ ಒಳ್ಳೆಯ ಹಿಂದೂ ಇನ್ನೊಂದು ಧಾರ್ಮಿಕ ಮಂದಿರವನ್ನು ಕೆಡವಿ ರಾಮ ಮಂದಿರ ಕಟ್ಟಬೇಕು ಎಂದು ಬಯಸಲಾರ’ ಎಂದು ಶಶಿ ತರೂರ್ ಹೇಳಿದ್ದಾರೆ.
									
										
								
																	ಆದರೆ ಶಶಿ ತರೂರ್ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಇದಾದ ಬಳಿಕ ಶಶಿ ತರೂರ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು ಕೆಲವು ಮಾಧ್ಯಮಗಳು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ತಿರುಚಿ ವರದಿ ಮಾಡಿವೆ. ನಾನು ಹೇಳಿದ್ದು ರಾಮಮಂದಿರದ ಹೆಸರಿನಲ್ಲಿ ಲಾಭ ಪಡೆಯುತ್ತಿರುವ ರಾಜಕೀಯ ಶಕ್ತಿಗಳ ಬಗ್ಗೆ ಎಂದು ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.