Select Your Language

Notifications

webdunia
webdunia
webdunia
webdunia

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!
ಬೆಂಗಳೂರು , ಗುರುವಾರ, 23 ಜೂನ್ 2022 (10:20 IST)
ಬೆಂಗಳೂರು  ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರ್ಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಇಂದು ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್  25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು. 

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ.

ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸಕ್ಕೆ ಹೋಗದ ಗಂಡನನ್ನು ಕೊಂದ ಪತ್ನಿ