Publish Date: Tue, 19 Jun 2018 (08:59 IST)
Updated Date: Tue, 19 Jun 2018 (09:02 IST)
ಬೆಂಗಳೂರು: ಬಜೆಟ್ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಜತೆಗೆ ಹಗ್ಗಜಗ್ಗಾಟ ನಡೆಯುತ್ತಿರುವ ಬಗ್ಗೆ ತಮ್ಮ ವಿರುದ್ಧ ರಾಹುಲ್ ಗಾಂಧಿಗೆ ದೂರಿದ್ದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಸಿದ್ದರಾಮಯ್ಯ ಕೆಂಡ ಕಾರಿದ್ದಾರೆ ಎನ್ನಲಾಗಿದೆ.
ಬಜೆಟ್ ವಿಚಾರದಲ್ಲಿ ತಾವು ತಕರಾರು ತೆಗೆದಿರುವುದಾಗಿ ಹೈಕಮಾಂಡ್ ಮುಂದೆ ಹೇಳಿದ್ದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯ ಬಗ್ಗೆ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರ ಸಲಹೆ ಅಗತ್ಯವಿಲ್ಲ. ನೀವು ಮುಂದುವರಿಯಿರಿ ಎಂದಿದ್ದರು.
ಇದೇ ವಿಚಾರವಾಗಿ ಕೆಸಿ ವೇಣುಗೋಪಾಲ್ ಮೇಲೆ ಮುನಿಸಿಕೊಂಡ ಸಿದ್ದರಾಮಯ್ಯ ಚೆನ್ನಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.