ಸಿದ್ದರಾಮಯ್ಯ ಫಾರಿನ್ ಟೂರ್ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ

Webdunia
ಸೋಮವಾರ, 3 ಸೆಪ್ಟಂಬರ್ 2018 (08:57 IST)
ಬೆಂಗಳೂರು: ಇಂದಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿಂದ ಮರಳಿದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಬೆಳಗಾವಿ ನಾಯಕ, ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ನಾಯಕರು ಸಚಿವ ಡಿಕೆ ಶಿವಕುಮಾರ್ ತಮ್ಮ ಜಿಲ್ಲೆಯ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ಭಿನ್ನಮತ ಕಾಂಗ್ರೆಸ್ ಹೈಕಮಾಂಡ್ ಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಹೀಗಾಗಿ ಈ ಭಿನ್ನಮತ ಶಮನ ಮಾಡುವ ಹೊಣೆಗಾರಿಕೆ ಸಿದ್ದರಾಮಯ್ಯ ಹೆಗಲಿಗೇರಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಈ ಹೊಣೆಗಾರಿಕೆಯನ್ನು ಸಿದ್ದರಾಮಯ್ಯಗೆ ನೀಡಿದ್ದಾರೆ. ಆದರೆ ಯುರೋಪ್ ಪ್ರವಾಸದಿಂದ ಬಂದ ಮೇಲೆಯೇ ಈ ಭಿನ್ನಮತ ಶಮನ ಮಾಡಲು ಸಂಧಾನ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮರಳಿದ ಬಳಿಕ ಕಾಂಗ್ರೆಸ್‍ ನಲ್ಲಿ ಏನೆಲ್ಲಾ ಬದಲಾವಣೆಯಾಗಲಿದೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments