Publish Date: Wed, 08 Dec 2021 (09:03 IST)
Updated Date: Wed, 08 Dec 2021 (09:06 IST)
ಬೆಂಗಳೂರು : ಕೊರೊನಾ ವೈರಸ್ನ ಮೂಲವಾಗಿರೋ ಒಮಿಕ್ರಾನ್ ವೈರಸ್ ದೇಶದಲ್ಲಿ ಆತಂಕ ಸೃಷ್ಟಿಸಿದೆ. ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ಆದ್ರೆ ಸದ್ಯ ಬಂದ ಮಾಹಿತಿಯಿಂದ ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದವರು ನಿರಾಳರಾಗಿದ್ದಾರೆ. ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೂ ರೂಪಾಂತರಿ ಒಮಿಕ್ರಾನ್ ಸೋಂಕು ಇಲ್ಲ.
ಕರ್ನಾಟಕದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತ ವೈದ್ಯನ ಸಂಪರ್ಕದಲ್ಲಿದ್ದ ಐವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿತ್ತು. ಕೊರೊನಾ ಸೋಂಕಿತರಿಗೆ ಒಮಿಕ್ರಾನ್ ಬಂದಿರಬಹುದೆಂದು ಐವರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳಿಸಲಾಗಿತ್ತು.
ಸದ್ಯ ಜಿನೇಮಿಕ್ ಸೀಕ್ವೆನ್ಸಿಂಗ್‌ನಲ್ಲಿ ಒಮಿಕ್ರಾನ್ ಇಲ್ಲವೆಂದು ದೃಢಪಡಿಸಿದೆ. ಇಂದು ಮಧ್ಯಾಹ್ನದ ಬಳಿಕ ಟೆಸ್ಟ್ ರಿಪೋರ್ಟ್ ಲಭ್ಯವಾಗಲಿದೆ. ಟೆಸ್ಟ್ ರಿಪೋರ್ಟ್ ಲಭ್ಯವಾದ ಬಳಿಕ ಮತ್ತೊಮ್ಮೆ ಐವರಿಗೂ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಿ ಬಳಿಕ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಇಂದೇ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.