Publish Date: Mon, 01 Nov 2021 (14:05 IST)
Updated Date: Mon, 01 Nov 2021 (14:07 IST)
ಅತಿ ಕಡಿಮೆ ಲಸಿಕೆ ನೀಡಲಾಗಿರುವ ಜಿಲ್ಲೆಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 3 ರಂದು ವರ್ಚುವಲ್ ಮೂಲಕ ಸಭೆ ನಡೆಸಲಿದ್ದಾರೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಜಾರ್ಖಂಡ್, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಮೇಘಾಲಯ ಸೇರಿದಂತೆ ಇತರೆ ರಾಜ್ಯಗಳ ಸುಮಾರು 40 ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ಸಂವಾದ ನಡೆಸಲಿದ್ದಾರೆ. ಈ ವೇಳೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
Ramya kosira
Publish Date: Mon, 01 Nov 2021 (14:05 IST)
Updated Date: Mon, 01 Nov 2021 (14:07 IST)