Publish Date: Sun, 16 Jan 2022 (10:08 IST)
Updated Date: Sun, 16 Jan 2022 (10:11 IST)
ನವದೆಹಲಿ : ವಿಕಲಾಂಗರಿಗೆ ಮತ್ತು ನಗರ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಗರ್ಭಿಣಿಯರಿಗೆ ವರ್ಕ್ ಫ್ರಮ್ ಹೋಮ್ ಮಾಡಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅವಕಾಶ ನೀಡಿದೆ.
ಈ ನೌಕರರು ಇನ್ನು ಮುಂದೆ ಕಚೇರಿಗಳಿಗೆ ಹಾಜರಾಗುವ ಅಗತ್ಯವಿಲ್ಲ ಎಂದು ಡಿಡಿಎಂಎ ತಿಳಿಸಿದೆ.
ಪಿಎಸ್ಯುಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ಆಗಮಿಸುವ ಅಂಗವಿಕಲರು ಮತ್ತು ಗರ್ಭಿಣಿಯರಿಗೆ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕಚೇರಿಗೆ ಆಗಮಿಸುವ ಬದಲಾಗಿ ಮನೆಯಲ್ಲಿಯೇ ಕೆಲಸ ಮಾಡಲು ವಿನಾಯಿತಿ ನೀಡಲಾಗಿದೆ.