ಪುತ್ರ ಸುನೀಲ್ ಬೋಸ್ ಗೆ ಅವಕಾಶ: ರಾಜಕಾರಣಕ್ಕೆ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಗುಡ್‌ಬೈ...?

Webdunia
ಶುಕ್ರವಾರ, 23 ಮಾರ್ಚ್ 2018 (13:14 IST)
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಬೇಕೊ ಅಥವಾ ಇಲ್ಲವೋ ಮತ್ತು ಎಲ್ಲಿಂದ ಸ್ಪರ್ಧೆ ಮಾಡಬೇಕು ಈ ಎಲ್ಲ ವಿಷಯಗಳನ್ನು ಪಕ್ಷ ನಿರ್ಧರಿಸಲಿದೆ ಎಂದು ಲೋಕೋಪಯೋಗಿ ಸಚಿವ ಡಾ.ಹೆಚ್.ಡಿ.ಮಹದೇವಪ್ಪ ಹೇಳಿದ್ದಾರೆ. 
ಹೈಕಮಾಂಡ್ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುವುದಷ್ಟೇ ನನ್ನ ಕೆಲಸ ಎಂದಿರುವ ಅವರು, ಚುನಾವಣೆಗೆ ಸ್ಪರ್ಧಿಸದೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವುದು ಕೂಡ ಒಳ್ಳೆಯ ವಿಚಾರವೇ ಎಂದು ಹೇಳುವ ಮೂಲಕ ಅವರ ವಿರುದ್ಧ ಕೇಳಿಬರುತ್ತಿರುವ ವದಂತಿಗಳಿಗೆ ಮತ್ತಷ್ಟು ಪುಷ್ಠಿ ನೀಡುವಂತೆ ಮಾತನಾಡಿದರು. 
 
ಈ ಮೂಲಕ ತಮ್ಮ ಪುತ್ರ ಸುನೀಲ್ ಬೋಸ್ ಗೆ ಅವಕಾಶ ನೀಡುವ ಸಲುವಾಗಿ ಚುನಾವಣಾ ರಾಜಕಾರಣದಿಂದ ಹೊರಗುಳಿಯಲು ನಿರ್ಧರಿಸಿದ್ದಾರಾ ಎನ್ನುವ ಪ್ರಶ್ನೆಗೆ ನೇರವಾಗಿ ಉತ್ತರ ನೀಡದೇ  ವದಂತಿಗಳಿಗೆ ಪುಷ್ಠಿ ನೀಡುವಂತೆ ಹೇಳಿಕೆ ನೀಡಿದರು. ನಾನು ಸಿ.ವಿ.ರಾಮನ್ ನಗರದಿಂದ ಸ್ಪರ್ಧಿಸಲು ಬಯಸಿ ಅರ್ಜಿ ಹಾಕಿಲ್ಲ. ಅಲ್ಲದೇ ಟಿ.ನರಸೀಪುರದಲ್ಲಿ ಅಪ್ಪ -ಮಕ್ಕಳ ಪೈಪೋಟಿ ಇದೆ ಎನ್ನುವ ಪ್ರಶ್ನೆ ಉದ್ಭವಿಸಲ್ಲ ಎಂದೂ ಹೇಳಿದರು. ಕೋಮುವಾದಿ ಶಕ್ತಿಗಳನ್ನು ಸೋಲಿಸುವುದು ನಮ್ಮ ಗುರಿ. ಸಕಲೇಶಪುರಕ್ಕೂ ನನ್ನ ಕರೆಯುತ್ತಿದ್ದಾರೆ. ಅವರು ಪ್ರೀತಿಯಿಂದ ಕರೆಯುತ್ತಾರೆ ಅಷ್ಟೇ ಎಂದು ಸಚಿವ ಮಹಾದೇವಪ್ಪ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments