Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಸಭೆಗೆ ತಾಯಿ ಸೋನಿಯಾ ಗಾಂಧಿ ಗೈರು

ರಾಹುಲ್ ಗಾಂಧಿ ಸಭೆಗೆ ತಾಯಿ ಸೋನಿಯಾ ಗಾಂಧಿ ಗೈರು
ನವದೆಹಲಿ , ಭಾನುವಾರ, 5 ಆಗಸ್ಟ್ 2018 (09:18 IST)
ನವದೆಹಲಿ: ನಿನ್ನೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಸಭೆಯ ನೇತೃತ್ವ ವಹಿಸಿದರು. ಆದರೆ ತಾಯಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಗೈರು ಎದ್ದು ಕಾಣುತ್ತಿತ್ತು.

ನಿನ್ನೆಯ ಸಭೆಗೆ ಕಾರಣಾಂತರಗಳಿಂದ ಸೋನಿಯಾ ಗಾಂಧಿ ಬಂದಿರಲಿಲ್ಲ. ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ಇದೇ ಎರಡನೇ ಬಾರಿಗೆ ರಾಹುಲ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಎನ್ ಆರ್ ಸಿ ವಿಚಾರ, ರಫೇಲ್ ಯುದ್ಧ ವಿಮಾನ ಒಪ್ಪಂದ ಖರೀದಿ ವಿಚಾರಗಳು ಚರ್ಚೆಯಾದವು ಎನ್ನಲಾಗಿದೆ. ಈ ವಿಚಾರವನ್ನೇ ಮುಂದಿಟ್ಟುಕೊಂಡು ಕೇಂದ್ರದ ವಿರುದ್ಧ ಮತ್ತಷ್ಟು ಒತ್ತಡ ಹೇರಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದ ವ್ಯಕ್ತಿ ಅರೆಸ್ಟ್