Select Your Language

Notifications

webdunia
webdunia
webdunia
webdunia

ಸರ್ಕಾರದ ವಿರುದ್ಧ ಕಿಡಿ?

ಸರ್ಕಾರದ ವಿರುದ್ಧ ಕಿಡಿ?
ಬೆಂಗಳೂರು , ಗುರುವಾರ, 24 ಫೆಬ್ರವರಿ 2022 (07:30 IST)
ಬೆಂಗಳೂರು : ಶ್ರೀಮಂತರ ಆದಾಯ ಏರಿಕೆ ಆಗುತ್ತಿದೆ. ಬಂಡವಾಳಿಗರಿಗೆ ಕಡಿಮೆ ತೆರಿಗೆ ವಿಧಿಸಿದ್ದರಿಂದ ಭಾರತದಲ್ಲಿ ಬಡವರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
 
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್ ಮಾಡಿದ ಸಿದ್ದರಾಮಯ್ಯ ಬೊಮ್ಮಾಯಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ.

ರಾಜ್ಯಪಾಲರು ಈ ಬಾರಿ ಸರ್ಕಾರದ ಒಂದು ವರ್ಷದ ಸಾಧನೆಯ ವರದಿಯನ್ನು ಸದನದಲ್ಲಿ ಓದಿದರು. ಸರ್ಕಾರವು ರಾಜ್ಯಪಾಲರ ಬಾಯಲ್ಲಿ ಹೇಳಿಸಿದ ಮಾತುಗಳಲ್ಲಿ ಬಹುಪಾಲು ಜೊಳ್ಳು ಹಾಗೂ ಈ ಸರ್ಕಾರಕ್ಕೆ ಯಾವುದೇ ಗೊತ್ತು ಗುರಿಗಳು ಇಲ್ಲ ಎಂಬುದರ ಸೂಚಕವಾಗಿವೆ.

ಅನೇಕ ಕಡೆ ಕೇಂದ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಸೂಚನೆಗಳನ್ನು ಮಂಡಿಸಿದ ಬಿಜೆಪಿಯ ಶಾಸಕರು ಮೋದಿಯವರನ್ನು ಮತ್ತು ಕೇಂದ್ರದ ಯೋಜನೆಗಳನ್ನು ಶ್ಲಾಘಿಸುವುದಕ್ಕಷ್ಟೆ ಸೀಮಿತಗೊಂಡರು. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಕಳಪೆ ಭಾಷಣವನ್ನು ಹಿಂದೆಂದೂ ಕೇಳಿರಲಿಲ್ಲ.

ಬಂಡವಾಳಿಗರ ಮೂಗಿನ ನೇರಕ್ಕೆ ದೇಶವನ್ನು ಮುನ್ನಡೆಸುತ್ತಿರುವ ಮೋದಿ ಅವರು ಇದರಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದಾರೆ ಎಂದರೆ, ಭಾರತದ ಅತಿ ಶ್ರೀಮಂತರಾದ ಅದಾನಿ ಅಂಬಾನಿ ಮುಂತಾದ 142 ಜನರ ಸಂಪತ್ತು 23 ಲಕ್ಷ ಕೋಟಿಗಳಿದ್ದದ್ದು ಈಗ ಅದು 53 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ. ಆದರೆ ಜನರ ಮೇಲಿನ ತೆರಿಗೆ ಹೊರೆ, ಬೆಲೆ ಏರಿಕೆ ಎರಡೂ ದುಪ್ಪಟ್ಟಾಗಿವೆ.

ಮನಮೋಹನಸಿಂಗರ ಕಾಲದಲ್ಲಿ ದೇಶ ಸಂಗ್ರಹಿಸುವ 100 ರೂ ತೆರಿಗೆಯಲ್ಲಿ ಜನರ ತೆರಿಗೆಯ ಪಾಲು 58 ರಷ್ಟಿತ್ತು. ಬಂಡವಾಳಿಗರ ತೆರಿಗೆ ಪಾಲು ಶೇ. 42 ರಷ್ಟಿತ್ತು. ಈಗ ಜನರ ಪಾಲು 75 ಕ್ಕೆ ಏರಿಕೆಯಾಗಿದೆ. ಬಂಡವಾಳಿಗರಿಂದ 25 ರೂಪಾಯಿ ಸಂಗ್ರಹಿಸುತ್ತಿದ್ದಾರೆ. ಇದರ ಫಲವಾಗಿ ದೇಶದ ಬಡವರ ಸಂಖ್ಯೆ ಹೆಚ್ಚುತ್ತಿದೆ. ದೇಶ ದೊಡ್ಡ ಸಾಲಗಾರನಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಮೊಗ್ಗದಲ್ಲಿ ಡ್ರೋಣ್ಗಳ ಕಾರ್ಯಾಚರಣೆ