Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪ್ರತಿಯೊಬ್ಬರಿಗೂ ಓಮಿಕ್ರಾನ್ ಹರಡುತ್ತೆ!

webdunia
ಬುಧವಾರ, 12 ಜನವರಿ 2022 (07:06 IST)
ನವದೆಹಲಿ : ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕನ್ನು ನಿಯಂತ್ರಿಸುವುದು ಅಸಾಧ್ಯ.

ಪ್ರತಿಯೊಬ್ಬರಿಗೂ ಈ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಕ್ಷೇತ್ರದ ಐಸಿಎಂಆರ್ ವೈದ್ಯರೊಬ್ಬರು ತಿಳಿಸಿದ್ದಾರೆ. ವ್ಯಾಪಕವಾಗಿ ಹರಡುತ್ತಿರುವ ಈ ಸೋಂಕನ್ನು ನಿಯಂತ್ರಿಸಲು ಬೂಸ್ಟರ್ ಡೋಸ್ನಿಂದಲೂ ಸಾಧ್ಯವಿಲ್ಲ.

ಯಾವುದೇ ವ್ಯತ್ಯಾಸವಿಲ್ಲದೇ, ವಿಶ್ವದ ಎಲ್ಲಾ ದೇಶಗಳಲ್ಲೂ ಓಮಿಕ್ರಾನ್ ತೀವ್ರಗತಿಯಲ್ಲಿ ಹರಡಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಡಾ.ಜಯಪ್ರಕಾಶ್ ಮುಲಿಯಿಲ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಮುಂದೆ ಕೋವಿಡ್ ಭಯಾನಕ ರೋಗವಾಗಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ಹೊಸ ತಳಿ ತನ್ನ ಪರಿಣಾಮದಲ್ಲಿ ಸೌಮ್ಯವಾಗಿದೆ. ಈ ಸೋಂಕಿಗೆ ತುತ್ತಾದವರಲ್ಲಿ ಕಡಿಮೆ ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನಾವು ನಿಭಾಯಿಸಬಲ್ಲ ಕಾಯಿಲೆ ಇದಾಗಿದೆ. ಇದು ಡೆಲ್ಟಾಗಿಂತ ಹೆಚ್ಚು ಸೌಮ್ಯವಾಗಿದೆ.

ವೈರಸ್ ಕೇವಲ ಎರಡು ದಿನಗಳಲ್ಲಿ ಸೋಂಕನ್ನು ದ್ವಿಗುಣಗೊಳಿಸುತ್ತದೆ. ಪರೀಕ್ಷಿಸಿ ಸೋಂಕನ್ನು ದೃಢಪಡಿಸುವ ಮೊದಲೇ ಸೋಂಕಿತ ಹೆಚ್ಚಿನ ಸಂಖ್ಯೆಯ ಜನರಿಗೆ ಅದನ್ನು ಹರಡಿರುತ್ತಾನೆ. ಈ ರೀತಿಯ ಸಾಂಕ್ರಾಮಿಕ ವಿಕಾಸದಲ್ಲಿ ನೀವು ಯಾವುದೇ ವ್ಯತ್ಯಾಸ ಕಾಣಲು ಸಾಧ್ಯವಿಲ್ಲ ಎಂದಿದ್ದಾರೆ.
.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಮೇಲೆ ಅತ್ಯಾಚಾರ ಮಾಡಿದವರನ್ನು ಗಂಡ ಏನ್ ಮಾಡ್ದ ನೋಡಿ!