Select Your Language

Notifications

webdunia
webdunia
webdunia
webdunia

ತುರ್ತು ಪರಿಸ್ಥಿತಿ ಘೋಷಿಸಿದ ಶ್ರೀಲಂಕಾ!

ತುರ್ತು ಪರಿಸ್ಥಿತಿ ಘೋಷಿಸಿದ ಶ್ರೀಲಂಕಾ!
ಕೊಲಂಬೋ , ಸೋಮವಾರ, 9 ಮೇ 2022 (09:00 IST)
ಕೊಲಂಬೋ : ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಳಾಗಿದೆ.

ಈ ಮೂಲಕ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ 5 ವಾರಗಳ ಅಂತರದಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ ಸೇರಿದಂತೆ ತೈಲ ಸಿಗದೆ ಜನ ತತ್ತರಿಸಿ ಹೋಗಿದ್ದರು.

ಆ ಬಳಿಕ ಜನ ಪ್ರತಿಭಟನೆಗೆ ಮುಂದಾಗಿದ್ದರು.  ನಿನ್ನೆ ಅಧ್ಯಕ್ಷರ ವಕ್ತಾರರು ತುರ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ತಾವು ಕಠಿಣ ಕಾನೂನುಗಳನ್ನು ಜಾರಿಗೊಳಿಸುತ್ತಿದ್ದು,

ಅಗತ್ಯ ಸೇವೆಗಳು ಹಾಗೂ ಶಾಂತಿ ಸುವ್ಯವಸ್ಥೆಗಳ ನಿರ್ವಹಣೆಯ ದೃಷ್ಟಿಯಿಂದ ಅಧ್ಯಕ್ಷರು ತಮ್ಮ ಅಧಿಕಾರ ಬಳಸಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.


Share this Story:

Follow Webdunia kannada

ಮುಂದಿನ ಸುದ್ದಿ

ಬುರ್ಖಾ ಕಡ್ಡಾಯ ಮಾಡಿದ ತಾಲಿಬಾನ್!