ಬೆಂಗಳೂರು : ಕೇಂದ್ರ ಸರ್ಕಾರ ಎಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಮೇ 22 ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಭಾರೀ ಕುಸಿದಿದೆ.
ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ ತೆರಿಗೆ ಮತ್ತು ಸುಂಕ ಮಂಡಳಿ ತಿಳಿಸಿದೆ.
ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ ಕಳೆದ ಎಂಟು ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟಕ್ಕೆ ಏರಿಕೆಯಾಗಿರುವ ನಡುವೆ, ಗ್ರಾಹಕರಿಗೆ ಕೊಂಚ ನಿರಾಳತೆ ನೀಡುವ ಗುರಿ ಹೊಂದಿದೆ. ಕೇಂದ್ರ ಸರ್ಕಾರ ಸುಂಕ ಕಡಿತಗೊಳಿಸಿದ ಬಳಿಕ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ?