Publish Date: Sat, 05 May 2018 (06:36 IST)
Updated Date: Sat, 05 May 2018 (06:39 IST)
ಬಾಗಲಕೋಟೆ : ಮೇ 9 ರಂದು ಸಿಎಂ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಪ್ರಚಾರ ಮಾಡುವ ವೇಳೆ ನಟ ಸುದೀಪ್ ಅವರು ಈ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿರುವ ಹಿನ್ನಲೆಯಲ್ಲಿ ಇದೀಗ ಸುದೀಪ್ ಅವರ ಪ್ರಚಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾದ ಶ್ರೀರಾಮುಲು ಅವರು ಕಣಕ್ಕಿಳಿಯುತ್ತಿದ್ದ ಹಿನ್ನಲೆಯಲ್ಲಿ ಈ ಮತಗಳನ್ನು ಸೆಳೆಯಲು ಸಿಎಂ ಸಿದ್ದರಾಮಯ್ಯ ಅವರು ವಾಲ್ಮಿಕಿ ನಾಯಕ ಸಮುದಾಯದ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆತರಲು ಸಿದ್ಧತೆ ನಡೆಸಿದ್ದರು.
ಆದರೆ ಇದಕ್ಕೆ ಕಾಂತಿ ವೀರ ಸಿಂಧೂರ ಲಕ್ಷ್ಣಣ ಯುವಸೇನೆ (ರಿ) ಜಿಲ್ಲಾ ಘಟಕ ವಿರೋಧ ವ್ಯಕ್ತಪಡಿಸಿದ್ದು, ಸಿ ಎಂ ವಿರುದ್ದವಾಗಿ ಬಿಜೆಪಿ ಪಕ್ಷದಿಂದ ಶ್ರೀ ರಾಮುಲು ಕಣಕ್ಕಿಳಿದ್ದಿದ್ದಾರೆ. ಶ್ರೀರಾಮುಲು ನಾಯಕ ಸಮುದಾಯಕ್ಕೆ ಸೇರಿದವರು. ಆದ್ದರಿಂದ ಬಾದಾಮಿಯಲ್ಲಿ ಶ್ರೀರಾಮುಲು ಗೆಲ್ಲಬೇಕು ನೀವು ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಬೇಡಿ. ಒಂದು ವೇಳೆ ಸಿಎಂ ಪರ ಪ್ರಚಾರ ಆಗಮಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ