ಬೆಂಗಳೂರು : ಮೀಸಲಾತಿ ಹೆಚ್ಚಳಕ್ಕೆ ಬಿಬಿಎಂಪಿ ಕಾಯ್ದೆಗೆ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ.
ಬಿಬಿಎಂಪಿ ಕಾಯ್ದೆಯಲ್ಲಿನ ಮೀಸಲಾತಿ ಪ್ರಮಾಣದ ಗೊಂದಲ ನಿವಾರಣೆಗೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ರಾಜ್ಯ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಬಿಬಿಎಂಪಿ ಕಾಯ್ದೆಯಲ್ಲಿ ಎಸ್ಸಿ, ಎಸ್ಟಿ ಹಾಗೂ ಇತರ ಹಿಂದುಳಿದ ಸಮುದಾಯಗಳ ಮೀಸಲಾತಿಯನ್ನು 1/3 ಎಂದು ನಮೂದಿಸಲಾಗಿತ್ತು.
ಇದರಿಂದ ಎಸ್ಸಿ, ಎಸ್ಟಿ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯಲ್ಲಿ ಅನ್ಯಾಯ ಆಗಲಿತ್ತು. ಇದನ್ನರಿತ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ ಮಾಡಲು ನಿರ್ಧರಿಸಿತ್ತು.
ಈಗ ಮೀಸಲಾತಿ ಪ್ರಮಾಣ ಶೇ. 50 ರಷ್ಟು ಮೀರದಂತೆ ಎಂದು ಬದಲಾವಣೆ ಮಾಡಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಸುಗ್ರೀವಾಜ್ಞೆಗೆ ಅನುಮೋದನೆ ಸಿಕ್ಕಿದೆ.