Publish Date: Sun, 11 Dec 2022 (15:55 IST)
Updated Date: Sun, 11 Dec 2022 (17:58 IST)
ಶಿಮ್ಲಾ : ಹಿಮಾಚಲ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಅವರು ಭಾನುವಾರ ಶಿಮ್ಲಾದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಹಿಮಾಚಲದ ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಶಿಮ್ಲಾದ ರಿಡ್ಜ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ 40, ಬಿಜೆಪಿ 25 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.