Select Your Language

Notifications

webdunia
webdunia
webdunia
webdunia

ವೇಶ್ಯಾವಾಟಿಕೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು

ವೇಶ್ಯಾವಾಟಿಕೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು
ನವದೆಹಲಿ , ಶುಕ್ರವಾರ, 27 ಮೇ 2022 (07:32 IST)
ನವದೆಹಲಿ : ವೇಶ್ಯಾವಾಟಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ.

ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ.

ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು ಆರು ನಿರ್ದೇಶನಗಳನ್ನು ನೀಡಿದೆ. ಪೀಠವು, “ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. 

ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆ ಆಧಾರದ ಮೇಲೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದರೆ ಪೊಲೀಸರು ಮಧ್ಯಪ್ರವೇಶಿಸುವುದು ಅಥವಾ ಯಾವುದೇ ಕ್ರಿಮಿನಲ್ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಹೇಳಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ರಕ್ಷಣೆಗೆ ಸಮಾನವಾಗಿ ಅರ್ಹರಾಗಿರುತ್ತಾರೆ ಅಂತ ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಹೇಳಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸ್ನೇಹಿತನ ಮೇಲೆ ಹಲ್ಲೆ: ಹಿಂದೂ ಕಾರ್ಯಕರ್ತ ಕೆರೆಹಳ್ಳಿ ಪುನೀತ್ ವಿರುದ್ಧ ಎಫ್ ಐಆರ್ ದಾಖಲು!