Select Your Language

Notifications

webdunia
webdunia
webdunia
webdunia

ಇನ್ಮುಂದೆ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ : ನಾಗೇಶ್

ಇನ್ಮುಂದೆ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ : ನಾಗೇಶ್
ಬೆಂಗಳೂರು , ಸೋಮವಾರ, 19 ಸೆಪ್ಟಂಬರ್ 2022 (14:12 IST)
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣ ಪಠ್ಯದಲ್ಲಿ ಭಗವದ್ಗೀತೆ ಬೋಧನೆ ಮಾಡುತ್ತೇವೆ ಅಂತ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿಯ ಪ್ರಾಣೇಶ್ ಹಾಗೂ ರವಿಕುಮಾರ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಶಾಲಾ ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಪ್ರತ್ಯೇಕವಾಗಿ ಬೋಧಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಆದರೆ ನೈತಿಕ ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುತ್ತೇವೆ.

ಇದಕ್ಕಾಗಿ ಒಂದು ಸಮಿತಿ ರಚನೆ ಮಾಡುತ್ತೇವೆ. ಡಿಸೆಂಬರ್ ವೇಳೆಗೆ ನೈತಿಕ ಶಿಕ್ಷಣ ಶಾಲೆಗಳಲ್ಲಿ ಜಾರಿಗೆ ತರುತ್ತೇವೆ ಎಂದರು. 

ಮೊದಲು ಇದ್ದ ಆಸಕ್ತಿ ಇದ್ದಕ್ಕಿದ್ದಂತೆ ಈಗ ಯಾಕಿಲ್ಲ ಅಂತ ಪ್ರಶ್ನೆ ಮಾಡಿದರು. ಅಲ್ಲದೇ ಬಾಬಾ ಬುಡನ್ ಗಿರಿಗೆ ದತ್ತಾಪೀಠ ಅಂತ ಹೆಸರು ಇಡಬೇಕು ಅಂತ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವರು, ಪಠ್ಯದಲ್ಲಿ ಸೇರ್ಪಡೆ ಇಲ್ಲ ಅಂತ ಹೇಳಿದ್ದೇವೆ. ನೈತಿಕ ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುತ್ತೇವೆ. ಡಿಸೆಂಬರ್ ವೇಳೆಗೆ ನೈತಿಕ ಶಿಕ್ಷಣ ಶಾಲೆಗಳಲ್ಲಿ ಪ್ರಾರಂಭ ಮಾಡುತ್ತೇವೆ.

ಇತಿಹಾಸದ ತಪ್ಪುಗಳನ್ನು ಪಠ್ಯದಲ್ಲಿ ಸರಿ ಮಾಡುವ ಕೆಲಸ ಮಾಡ್ತಿದ್ದೇವೆ. ಬಾಬಾ ಬುಡನ್ ಗಿರಿ ಹೆಸರು ಈಗಾಗಲೇ ದತ್ತಾತ್ರೇಯ ಪೀಠ ಅಂತ ಬದಲಾವಣೆ ಮಾಡಲಾಗಿದೆ ಅಂತ ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಸಂಪೂರ್ಣ ಪ್ರಾರಂಭ : ಸುಧಾಕರ್