Publish Date: Fri, 11 Feb 2022 (06:31 IST)
Updated Date: Fri, 11 Feb 2022 (00:32 IST)
ಬೆಂಗಳೂರು : ರಾಜ್ಯದಲ್ಲಿ ಹಿಜಬ್ ಸಂಘರ್ಷದ ನಡುವೆ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿ ವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಶಕ್ತಿ ಭವನದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಶಾಲೆಗಳ ಡ್ರೆಸ್ ಕೋಡ್ ವಿವಾದ ಶುರುವಾಗಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ನ್ಯಾಯಾಲಯ ನೀಡಿರುವ ಸೂಚನೆಯನ್ನು ಸರ್ಕಾರ ಗೌರವಿಸುತ್ತದೆ. ಮೊದಲ ಹಂತವಾಗಿ 10ನೇ ತರಗತಿ ವರೆಗೆ ಶಾಲೆಗಳನ್ನು ಸೋಮವಾರದಿಂದ ಆರಂಭಿಸುತ್ತಿದ್ದೇವೆ ಎಂದರು.
ಶಾಲಾ ಮಕ್ಕಳು ಸಂಯಮದಿಂದ ವರ್ತಿಸುತ್ತಿದ್ದಾರೆ ಅವರಿಗೆ ಪ್ರೀತಿಯ ಅಭಿನಂದನೆ ಸಲ್ಲಿಸುತ್ತೇನೆ. ಮೊದಲ ಹಂತದಲ್ಲಿ ಹತ್ತನೇ ತರಗತಿವರೆಗೆ ಆರಂಭದ ಬಳಿಕ ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜ್ಗಳನ್ನು ಆರಂಭಿಸುತ್ತೇವೆ.
ನಾಳೆ ಸಂಜೆ ಸಚಿವರ ಜೊತೆ ಸೇರಿ ವೀಡಿಯೋ ಕಾನ್ಫರೆನ್ಸ್ ಮಾಡುತ್ತೇನೆ ನಂತರ ಕಾಲೇಜುಗಳ ಆರಂಭದ ಬಗ್ಗೆ ಪ್ರಕಟಣೆ ಹೊರಡಿಸುತ್ತೇವೆ ಎಂದು ತಿಳಿಸಿದರು.