Select Your Language

Notifications

webdunia
webdunia
webdunia
webdunia

ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ

ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ
ನವದೆಹಲಿ , ಗುರುವಾರ, 25 ಮೇ 2023 (13:06 IST)
ನವದೆಹಲಿ : ಕಳೆದ ವರ್ಷ ಭಾರತದ ಕೆಮ್ಮಿನ ಸಿರಪ್ ಸೇವಿಸಿದ ಬಳಿಕ ಗ್ಯಾಂಬಿಯಾ ಹಾಗೂ ಉಜ್ಬೇಕಿಸ್ತಾನದಲ್ಲಿ ಹಲವು ಮಕ್ಕಳ ಸಾವಾಗಿತ್ತು. ಈ ಘಟನೆಯ ಬಳಿಕ ಇದೀಗ ಭಾರತ ಸರ್ಕಾರ ಕೆಮ್ಮಿನ ಸಿರಪ್ಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೊದಲು ಅದನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯಗೊಳಿಸಿದೆ.
 
ಯಾವುದೇ ಕೆಮ್ಮಿನ ಸಿರಪ್ ಅನ್ನು ರಫ್ತು ಮಾಡುವುದಕ್ಕೂ ಮೊದಲು ಸರ್ಕಾರಿ ಪ್ರಯೋಗಾಲಯ ನೀಡಿದ ವಿಶ್ಲೇಷಣೆಯ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಈ ನಿಯಮ ಜೂನ್ 1 ರಿಂದ ಜಾರಿಗೆ ಬರಲಿದೆ ಎಂದು ಮಂಗಳವಾರ ಆರೋಗ್ಯ ಸಚಿವಾಲಯ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಟಿ ಕ್ಷೇತ್ರದಲ್ಲಿ ಒಂದೇ ವರ್ಷಕ್ಕೆ 60 ಸಾವಿರ ಜಾಬ್ ಕಟ್