Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ದಿನೇ ದಿನೇ ಏರುತ್ತಿರುವ ಸೋಂಕು!

ಬೆಂಗಳೂರಿನಲ್ಲಿ ದಿನೇ ದಿನೇ ಏರುತ್ತಿರುವ ಸೋಂಕು!
ಬೆಂಗಳೂರು , ಬುಧವಾರ, 27 ಏಪ್ರಿಲ್ 2022 (09:02 IST)
ಬೆಂಗಳೂರು : ಕೊರೊನಾ 4ನೇ ಅಲೆ ಭೀತಿಯ ಬೆನ್ನಲ್ಲೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ.
 
ಇಂದು ಒಟ್ಟು 85 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ನಿನ್ನೆಗಿಂತ 21 ಪ್ರಕರಣಗಳು ಹೆಚ್ಚಾಗಿದೆ. ಆದರೂ ಕಳೆದ ಹಲವು ದಿನಗಳಿಂದ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.

ಬೆಂಗಳೂರು ನಗರದಲ್ಲಿ ಇಂದು 82 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ನಿಧಾನವಾಗಿ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ರಾಜ್ಯದ ಪಾಸಿಟಿವಿಟಿ ರೇಟ್ 1.18% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,686 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮಂದಿ ಮೃತಪಟ್ಟಿದ್ದಾರೆ. 70 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಈವರೆಗೆ ರಾಜ್ಯದಲ್ಲಿ ಒಟ್ಟು 39,47,083 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,298 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ರಾಜ್ಯದಲ್ಲಿ ಇಂದು ಒಟ್ಟು 57,468 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 7,171 ಸ್ಯಾಂಪಲ್ (ಆರ್ಟಿ ಪಿಸಿಆರ್ 4,642 + 2529 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಿಗೆ 3 ಲಸಿಕೆಗಳ ಅನುಮತಿ