Select Your Language

Notifications

webdunia
webdunia
webdunia
webdunia

ಇಂದಿನಿಂದ ಆರಂಭ ದಸರೆಯ ವೈಭವ

ಇಂದಿನಿಂದ ಆರಂಭ ದಸರೆಯ ವೈಭವ
ಮೈಸೂರು , ಗುರುವಾರ, 7 ಅಕ್ಟೋಬರ್ 2021 (09:46 IST)
ಮೈಸೂರು : ಇಂದಿನಿಂದ 15ವರೆಗೆ ದಸರಾ ನಡೆಯಲಿದ್ದು,ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಹ ಕಳೆದ ಬಾರಿಯಂತೆ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಮನೆ ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ.

ಇನ್ನು ಕಳೆದ ಬಾರಿಯಂತೆಯೆ ಈ ಬಾರಿ ಸಹ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಗಿದ್ದು, ಚಾಮುಂಡೇಶ್ವರಿ ದೇವಿಗೆ  ಪುಷ್ಪಾರ್ಚನೆ ಮೂಲಕ ಮಾಜಿ ಮುಖ್ಯಮಂತ್ರಿ  ಎಸ್.ಎಂ.ಕೃಷ್ಣ ಈ ಬಾರಿ ದಸರಾಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ  ಸಿಎಂ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್ , ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ, ಸುನೀಲ್ ಕುಮಾರ್, ಶಿವರಾಂ ಹೆಬ್ಬಾರ್ ಸೇರಿದಂತೆ ಮೈಸೂರು ಭಾಗದ ಶಾಸಕರು, ಸಂಸದರು ಭಾಗಿಯಾಗಿದ್ದರು. 
ಇಂದಿನಿಂದ 15ವರೆಗೆ ದಸರಾ ನಡೆಯಲಿದ್ದು,ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಹ ಕಳೆದ ಬಾರಿಯಂತೆ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಮನೆ ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ಇನ್ನು ಕಳೆದ ಬಾರಿಯಂತೆಯೆ ಈ ಬಾರಿ ಸಹ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಈ ಬಾರಿ ಕೂಡ ಜಂಬೂ ಸವಾರಿ ಕೇವಲ ಅರಮನೆಗೆ ಮಾತ್ರ ಸೀಮಿತವಾಗಿದೆ.
ಮನುಕುಲಕ್ಕೆ ಬಂದ ದೊಡ್ಡ ಗಂಡಾಂತರ ಕೊರೊನಾ, ಈ ಗಂಡಾಂತರದಿಂದ ಪಾರು ಮಾಡಿ ಎಂದು ಚಾಮುಂಡಿದೇವಿಗೆ ಪೂಜೆ ಸಲ್ಲಿಸಿದ್ದೇವೆ ಎಂದು 411ನೇ ಮೈಸೂರು ದಸರಾ ಉದ್ಘಾಟನೆ ಮಾಡಿದ ಬಳಿಕ ಎಸ್.ಎಂ. ಕೃಷ್ಣ ಹೇಳಿಕೆ.  ದೊಡ್ಡ ಗೌರವ ನೀಡಿದ್ದೀರಿ ಎಂದು ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ಅವರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಏನಿದೆ ಮಾರ್ಗಸೂಚಿಯಲ್ಲಿ?
ಮೈಸೂರು ದಸರಾ ಬಿಟ್ಟು ರಾಜ್ಯದ ಯಾವುದೇ ಭಾಗದಲ್ಲಿ ಒಮ್ಮೆಲೆ 400 ಜನ ಸೇರುವಂತಿಲ್ಲ.
ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ.
ಆಯಾ ಜಿಲ್ಲೆಯ ಜಿಲ್ಲಾಡಳಿತ ಯಾವುದೇ ನಿಯಮಗಳನ್ನು ವಿಧಿಸುವ ಮುನ್ನ ಅದರ ಬಗ್ಗೆ ಜನರಿಗೆ ಸರಿಯಾಗಿ ಮಾಹಿತಿ ನೀಡಿರಬೇಕು.
ಸಾಮಾಜಿಕ ಅಂತರವಿಲ್ಲದೆ ಯಾವುದೇ ಕಾರ್ಯಕ್ರಮ ನಡೆಯುತ್ತಿರುವುದನ್ನ ಕಂಡು ಬಂದಲ್ಲಿ ಅದನ್ನು ನಿಷೇಧಿಸಲಾಗುತ್ತದೆ.
ಸರ್ಕಾರ ಹೊರಡಿಸಿರುವ ಕೊರೊನಾ ನಿಯಮಗಳನ್ನು ತಪ್ಪದೇ ಪಾಲನೆ ಮಾಡಬೇಕು.
ಯಾವುದೇ ರೀತಿಯ ಕಾನೂನು ಭಂಗ ಮಾಡದೇ ಶಾಂತಿಯಿಂದ ಹಬ್ಬ ಆಚರಣೆ ಮಾಡಬೇಕು.


Share this Story:

Follow Webdunia kannada

ಮುಂದಿನ ಸುದ್ದಿ

ಮಳೆಯ ಆರ್ಭಟದ ನಡುವೆ ಪವರ ಕಟ್ ಸಮಸ್ಯೆ