Select Your Language

Notifications

webdunia
webdunia
webdunia
webdunia

ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್ಫೀಲ್ಡ್ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ

ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್ಫೀಲ್ಡ್ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ
ಬೆಂಗಳೂರು , ಸೋಮವಾರ, 11 ಅಕ್ಟೋಬರ್ 2021 (08:49 IST)
ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್ಫೀಲ್ಡ್ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Photo Courtesy: Google

ಭಾನುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಕೋವಿಡ್ಫೀಲ್ಡ್ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ಜಿಲ್ಲೆಯಲ್ಲೂ ಇದೇ ಮಾದರಿಯ ಆಸ್ಪತ್ರೆ ಆರಂಭಿಸಲಾಗುವುದು.ಆಸ್ಪತ್ರೆ ನಿರ್ಮಾಣಕ್ಕೆ ಸಮಸ್ಯೆಯಿದೆ.ಹೀಗಾಗಿ ವೈದ್ಯರು, ನರ್ಸ್, ಸಿಬ್ಬಂದಿ ನಿಯೋಜನೆ ಮಾಡಿ ಬಳಕ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಲಿದೆ ಎಂದು ತಿಳಿಸಿದರು.
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ನೆರವು ನೀಡುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳು ತಾವು ಬೆಳೆಯಲು ಅನುವು ಮಾಡಿಕೊಟ್ಟ ಸಮಾಜಕ್ಕೆ ಕೊಡುಗೆ ನೀಡಿ,ಉಪಕಾರ ಸ್ಮರಣೆ ಮಾಡುತ್ತಿವೆ. ಸರ್ಕಾರದ ಪ್ರಯತ್ನಗಳಲ್ಲಿ ಕೈಜೋಡಿಸುವ ಈ ಸಂಸ್ಥೆಗಳ ಉಪಕಾರಸ್ಮರಣೆಯನ್ನು ಸರ್ಕಾರ ಕೂಡ ಮಾಡಲಿದೆ ಎಂದು ಹೇಳಿದರು.
ಹುಟ್ಟಿದ ಕೂಡಲೇ ಯಾರೂ ದೊಡ್ಡವರಾಗುವುದಿಲ್ಲ.ನಮ್ಮ ಪೋಷಕರು, ಗುರುಗಳು, ನಮ್ಮ ಸಮಾಜ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಬೆಳವಣಿಗೆಗೆ ಕೊಡುಗೆ ನೀಡುತ್ತಾರೆ.ನಾವು ಬೆಳೆಯುವುದರೊಂದಿಗೆ ನಮ್ಮ ಸುತ್ತಮುತ್ತಲಿನವರನ್ನೂ ಬೆಳೆಸಬೇಕು.ಸಮಾಜಕ್ಕೆ ನಾವು ಪಡೆದುಕೊಂಡಿರುವುದರಲ್ಲಿ ಕಿಂಚಿತ್ತಾದರೂ ಹಿಂತಿರುಗಿಸಬೇಕು.ಬದುಕು ಸಾರ್ಥವಾಗಲಿದೆ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯ ಬಾಹ್ಯಾಕಾಶ ಒಕ್ಕೂಟಕ್ಕೆ ಇಂದು ಚಾಲನೆ