ಸಿಎಂ ಪರ ಪ್ರಚಾರ ಮಾಡದಂತೆ ದರ್ಶನ್ ವಿರುದ್ಧ ಪ್ರತಿಭಟನೆ ಮಾಡಿದ ಜೆಡಿಎಸ್ ಕಾಯಕರ್ತರು

Webdunia
ಸೋಮವಾರ, 7 ಮೇ 2018 (06:55 IST)
ಬೆಂಗಳೂರು : ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಸಿಎಂ ಸಿದ್ದಾರಾಮಯ್ಯ ಅವರ ಪರವಾಗಿ ಪ್ರಚಾರಕ್ಕೆ ನಟ ಸುದೀಪ್ ಅವರು ಆಗಮಿಸುವ ವಿಷಯ ತಿಳಿಯುತ್ತಲೇ ಅದಕ್ಕೆ  ವಿರೋಧ ವ್ಯಕ್ತವಾಗಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ  ಇದೀಗ ನಟ ದರ್ಶನ್ ಅವರು ಕೂಡ ಸಿಎಂ ಪರ ಪ್ರಚಾರದಲ್ಲಿ ತೊಡಗಿದ್ದಾಗ ಅದನ್ನು ವಿರೋಧಿಸಿ ಸ್ಥಳದಲ್ಲೆ ಅನೇಕರು  ಪ್ರತಿಭಟನೆ ನಡೆಸಿದ್ದಾರೆ.

ಹೌದು. ನಟ ದರ್ಶನ್ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರದಂದು ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದರು. ಆಗ ನಾಗನಹಳ್ಳಿಯಲ್ಲಿ ಜೆಡಿಎಸ್ ಕಾಯಕರ್ತರು ದರ್ಶನ್ ಅವರು ಪ್ರಚಾರ ಮಾಡದಂತೆ ವಿರೋಧಿಸಿ ಅಂಬರೀಷ್ ಅವರ ಸಚಿವ ಸ್ಥಾನ ಕಿತ್ತುಕೊಂಡಾಗ ಯಾಕೆ ಮಾತನಾಡಲಿಲ್ಲ, ಕಾವೇರಿ ಪರ ಹೋರಾಟ ಯಾಕೆ ಮಾಡಲಿಲ್ಲ ಎಂದು  ಪ್ರಶ್ನಿಸಿದ್ದಾರೆ. ಅಲ್ಲದೇ ದರ್ಶನ್ ಹಾಗೂ ಸಿದ್ದರಾಮಯ್ಯಗೆ ಧಿಕ್ಕಾರ ಕೂಗಿದ್ದಾರೆ.


 

ಇಷ್ಟೆಲ್ಲಾ ನಡೆದರೂ ಕೂಡ ದರ್ಶನ್ ಅವರು ಪ್ರಚಾರ ಕಾರ್ಯವನ್ನು ಮುಂದುವರಿಸಿದ್ದು, ಇದರಿಂದ ಪ್ರತಿಭಟನೆಯ ಕಾವು ಇನ್ನಷ್ಟು ಹೆಚ್ಚಾದ್ದರಿಂದ ಸಿದ್ದರಾಮಯ್ಯ ಪರ ಪ್ರಚಾರ ಕಣದಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಥಳ ಬದಲಾಯಿಸಿದ್ದಾರೆ. ಇನ್ನು ಈ ವೇಳೆ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ ಪಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುಲು ಕೊನೆ ದಿನಾಂಕ, ಹೇಗೆ ನೋಡಿ

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಪ್ರತಿಕ್ರಿಯೆ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಮುಂದಿನ ಸುದ್ದಿ
Show comments