Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್!?

ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್!?
ಬೆಂಗಳೂರು , ಬುಧವಾರ, 29 ಡಿಸೆಂಬರ್ 2021 (18:27 IST)
ಹುಬ್ಬಳ್ಳಿ : ಉದ್ಯಮ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು "ನೈಟ್ ಕರ್ಫ್ಯೂ" ಸೇರಿದಂತೆ ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಮರು ಪರಿಶೀಲಿಸುವ ಸುಳಿವು ನೀಡಿದ್ದಾರೆ.

ಮತ್ತಷ್ಟು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ನಿಯಂತ್ರಣ ಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರ 10 ದಿನಗಳವರೆಗೆ ಘೋಷಿಸಿದ ನೈಟ್ ಕರ್ಫ್ಯೂ ಮಂಗಳವಾರ ರಾತ್ರಿಯಿಂದ ರಾಜ್ಯಾದ್ಯಂತ ಜಾರಿಗೆ ಬಂದಿದೆ.

ಇದು ಜನವರಿ 7ರ ವರೆಗೆ ಪ್ರತಿದಿನ  ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ, ಈ ಸಮಯದಲ್ಲಿ ಯಾವುದೇ ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ.

ರಾತ್ರಿ ಕರ್ಫ್ಯೂಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, "ನಾನು ಅವರೆಲ್ಲರನ್ನೂ ಗಮನಿಸುತ್ತಿದ್ದೇನೆ, ನಾಳೆ ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ" ಎಂದು ಹೇಳಿದರು.

ನಿಯಂತ್ರಣ ಕ್ರಮಗಳ ಭಾಗವಾಗಿ, ಸರ್ಕಾರ ಎಲ್ಲಾ ಹೊಸ ವರ್ಷದ ಪಾರ್ಟಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿಗಳನ್ನು ನಿಷೇಧಿಸಿದೆ ಮತ್ತು ಹೋಟೆಲ್ಗಳು, ಪಬ್ಗಳು, ಕ್ಲಬ್ಗಳು ಮತ್ತು ರೆಸ್ಟೋರೆಂಟ್ಗಳಂತಹ ಸ್ಥಳಗಳು ಡಿಸೆಂಬರ್ 30 ರಿಂದ ಜನವರಿ 1ರ ವರೆಗೆ ತಮ್ಮ ಆಸನ ಸಾಮರ್ಥ್ಯದ ಶೇಕಡಾ 50 ರಷ್ಟು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಲೆಗಳ ಬಲವರ್ಧನೆಗೆ ಸಮುದಾಯದ ಸಹಕಾರ ಅಗತ್ಯ