Webdunia - Bharat's app for daily news and videos

Install App

ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ !

Webdunia
ಶುಕ್ರವಾರ, 15 ಸೆಪ್ಟಂಬರ್ 2023 (09:01 IST)
ತಿರುವನಂತಪುರಂ : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಕೋಯಿಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.

ಪ್ರಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ.

ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ.

ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments