ಕೊರೊನಾ ರೋಗಿಗಳನ್ನು ಹೊರತುಪಡಿಸಿ ಉಕ್ರೇನ್ನಲ್ಲಿ ನವಜಾತ ಶಿಶುಗಳು, ಗರ್ಭಿಣಿಯರು ಮತ್ತು ವೃದ್ಧರಿಗೂ ಕಾಲಕಾಲಕ್ಕೆ ಆಮ್ಲಜನಕದ ಅಗತ್ಯವಿರಬಹುದು ಅಂತ ಡಬ್ಲ್ಯುಹೆಚ್ಒ ಉಲ್ಲೇಖಿಸಿದೆ.
ಯುದ್ಧದ ಭರಾಟೆಯಲ್ಲಿ ಜನರ ಮನಸ್ಥಿತಿಯ ಮೇಲೂ ಪರಿಣಾಮ ಬೀರಿ ಪರಿಸ್ಥಿತಿ ಚಿಂತಾಜನಕವಾಗಿದೆ. ಇಂತಹ ವಿಷಮ ಪರಿಸ್ಥಿತಿಯಿಂದಾಗಿ ಅಲ್ಲಿನ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಎದುರಾಗಿದೆ.
ಆಕ್ಸಿಜನ್ ಜನರೇಟರ್ ಪ್ಲಾಂಟ್ನಿಂದ ಆಸ್ಪತ್ರೆಗೆ ಆಮ್ಲಜನಕ ಸಾಗಿಸುವಲ್ಲಿಯೂ ಲಾರಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿವೆ.