Select Your Language

Notifications

webdunia
webdunia
webdunia
webdunia

ಚಾಲೆಂಜ್ ಮಾಡಿದ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ

ಚಾಲೆಂಜ್ ಮಾಡಿದ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ
ಬೆಂಗಳೂರು , ಭಾನುವಾರ, 19 ಸೆಪ್ಟಂಬರ್ 2021 (14:38 IST)
ಕೊರೊನಾ ಕಾರಣ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದ ಕಾರಣ ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್  ಎಸ್ ಎಲ್  ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂಕ ನಿಗದಿಗೊಳಿಸಲು ತೀರ್ಮಾನಿಸಲಾಗಿತ್ತು.

ಜತೆಗೆ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಫಲಿತಾಂಶವನ್ನು ಘೋಷಣೆ ಮಾಡಲಾಗಿತ್ತು. ಆದರೆ ಹಲವಾರು ವಿದ್ಯಾರ್ಥಿಗಳು ಆ ಫಲಿತಾಂಶವನ್ನು ಒಪ್ಪಿರಲಿಲ್ಲ. ಅದನ್ನು ತಿರಸ್ಕರಿಸಿ ಪರೀಕ್ಷೆ ಬರೆದಿದ್ದರು. ಅದರ ಫಲಿತಾಂಶ ನಾಳೆ ಘೋಷಣೆಯಾಗಲಿದೆ.
ಸೆಪ್ಟೆಂಬರ್ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಪರೀಕ್ಷೆ ನಡೆದಿತ್ತು. ಅದರ ಫಲಿತಾಂಶವನ್ನು ನಾಳೆ 10. 30-ರ ಸುಮಾರಿಗೆ ಪ್ರಕಟ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ನಾಳೆ ಅಂದರೆ ಸೆಪ್ಟೆಂಬರ್ 10ರಂದು2021 ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಘೋಷಣೆಯಾಗಲಿದ್ದು, ಪಿಯು ಬೋರ್ಡ್ ಫಲಿತಾಂಶದಲ್ಲಿ ಲಭ್ಯವಾಗಲಿದೆ. ನಾಳೆ ವಿಧಾನಸೌಧದಲ್ಲಿ 10.30ಕ್ಕೆ ಪಿಯುಸಿ ಫಲಿತಾಂಶ ಕುರಿತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಟಿ ನಡೆಸಲಿದ್ದು, ಪಿಯು ಬೋರ್ಡ್ ನಿರ್ದೇಶಕಿ ಡಾ ಆರ್ ಸ್ನೇಹಲ್ ಉಪಸ್ಥಿತಿ ಇರಲಿದ್ದಾರೆ.
ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅನ್ನು ಇಟ್ಟುಕೊಂಡು http://karresults.nic.in ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಇದಲ್ಲದೆ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ದ್ವಿತೀಯ ಪಿಯುಸಿಯ ಫಲಿತಾಂಶ ಲಭ್ಯವಾಗಲಿದೆ .
ಕೊರೊನಾ ಕಾರಣಕ್ಕೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿತ್ತು. ಈ ಫಲಿತಾಂಶ ಚಾಲೆಂಜ್ ಮಾಡಿ ಪರೀಕ್ಷೆ ಬರೆದಿದ್ದ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಸಹ ಬರೆದಿದ್ದರು. ಖಾಸಗಿ ಅಭ್ಯರ್ಥಿಗಳು 17,470 , ಚಾಲೆಂಜ್ ಮಾಡಿ ಪರೀಕ್ಷೆ ಬರೆದಿದ್ದ 592 ವಿದ್ಯಾರ್ಥಿಗಳು ಹಾಗೂ 351 ವಿದ್ಯಾರ್ಥಿಗಳು ರಿಪಿಟರ್ಸ್ ಚಾಲೆಂಜ್ ಪರೀಕ್ಷೆ ಬರೆದಿದ್ದರು. ಒಟ್ಟು 18,413 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ರು ಎಂದು ಇಲಾಖೆ ಮಾಹಿತಿ ನೀಡಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರೆಂಟಿಶಿಪ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಭಾರತ್ ಪೆಟ್ರೋಲಿಯಂ