Select Your Language

Notifications

webdunia
webdunia
webdunia
webdunia

ಮತ್ತೊಮ್ಮೆ ಬೂಸ್ಟರ್ ಡೋಸ್ ನೀಡಲು ವಿಶ್ವ ಆರೋಗ್ಯ ಸಂಸ್ಥೆ ಸಲಹೆ

ಮತ್ತೊಮ್ಮೆ ಬೂಸ್ಟರ್ ಡೋಸ್ ನೀಡಲು ವಿಶ್ವ ಆರೋಗ್ಯ ಸಂಸ್ಥೆ ಸಲಹೆ
ನವದೆಹಲಿ , ಸೋಮವಾರ, 3 ಏಪ್ರಿಲ್ 2023 (14:23 IST)
ನವದೆಹಲಿ : ಅನಾರೋಗ್ಯದಿಂದ ಬಳಲುತ್ತಿರುವವರಿಗೆ, ಆರೋಗ್ಯಕಾರ್ಯಕರ್ತರಿಗೆ 6 ಅಥವಾ 12 ತಿಂಗಳ ಬಳಿಕ ಮತ್ತೊಂದು ಬೂಸ್ಟರ್ ಡೋಸ್ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರ ಸಮಿತಿ ಸಲಹೆ ನೀಡಿದೆ.
 
ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳು, ರಕ್ಷಣಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರಿಗೆ ಮತ್ತೊಂದು ಬೂಸ್ಟರ್ ಡೋಸ್ ನೀಡಬೇಕು. ಒಂದು ವೇಳೆ ಇವರು ಕೋವಿಡ್ಗೆ ತುತ್ತಾದರೆ ಹೆಚ್ಚಿನ ತೊಂದರೆ ಎದುರಿಸ ಬೇಕಾಗಬಹುದು ಎಂದು ಸಮಿತಿ ಮುನ್ನೆಚ್ಚರಿಕೆ ನೀಡಿದೆ.

ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಯುವಕರಿಗೆ ಈಗಾಗಲೇ ನೀಡಿರುವ ಬೂಸ್ಟರ್ ಡೋಸ್ ಸಾಕಾಗುತ್ತದೆ ಎಂಬ ಅಭಿಪ್ರಾಯವನ್ನು ಸಮಿತಿ ವ್ಯಕ್ತಪಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಗ್ಲಿಷ್ ಭಾಷೆ ಬ್ಯಾನ್ : ಸಂವಹನ ನಡೆಸಿದರೆ ಭಾರೀ ದಂಡ