Publish Date: Sun, 08 May 2022 (09:38 IST)
Updated Date: Sun, 08 May 2022 (10:41 IST)
ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ, ಇದೆಲ್ಲಾ ಊಹಾಪೋಹ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಂ ಮತ್ತು ನನ್ನ ಭೇಟಿ ಸಹಜ. ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.
ನಾನು ದೆಹಲಿಯಿಂದ ಸಾಮಾನ್ಯನಾಗಿ ಬಂದಿದ್ದೇನೆ. ಯಾವುದೇ ಲಿಸ್ಟ್ ತಂದಿಲ್ಲ. ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಇರುತ್ತಾರೆ. ಮಾಧ್ಯಮಗಳಲ್ಲಿ ಮಾತ್ರ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಸುದ್ದಿ ಪ್ರಸಾರವಾಗುತ್ತಿದೆ ಎಂದಿದ್ದಾರೆ.