ಬೆಂಗಳೂರು : ಖಾಸಗಿ ಶಾಲೆಗಳಿಂದಲೂ 40 ಪರ್ಸೆಂಟ್ ಕಮಿಷನ್ ಪಡೆಯುತ್ತಿರುವುದಾಗಿ ಆರೋಪ ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತ ರಾಜ್ಯಸರ್ಕಾರ ಅನಧಿಕೃತ ಖಾಸಗಿ ಶಾಲೆಗಳ ವಿರುದ್ಧ ಸಮರ ಸಾರಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಪರೇಷನ್ ಕ್ಲೀನ್ ಅಭಿಯಾನ ಶುರು ಮಾಡಿದ್ದು, ಅನುಮತಿಯಿಲ್ಲದೇ ನಡೆಸುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ರಾಜ್ಯದಲ್ಲಿ ನೂರಾರು ಅನಧಿಕೃತ ಖಾಸಗಿ ಶಾಲೆಗಳು ತಲೆ ಎತ್ತಿದ್ದು, ಅವುಗಳ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ.
ದಾಖಲಾತಿ ಇಲ್ಲದ ಹಾಗೂ ಅನುಮತಿ ಪಡೆಯದೇ ನಡೆಸುತ್ತಿರೋ ಅನಧಿಕೃತ ಶಾಲೆಗಳ ವಿರುದ್ಧ ವರದಿ ಸಿದ್ಧಪಡಿಸಲಾಗಿದ್ದು, ಅಂತಹ ಶಾಲೆಗಳನ್ನು ಬಂದ್ ಮಾಡಲು ಇಲಾಖೆ ದಿಟ್ಟ ನಡೆ ತೆಗೆದುಕೊಂಡಿದೆ.