Publish Date: Sun, 11 Sep 2022 (07:51 IST)
Updated Date: Sat, 10 Sep 2022 (23:53 IST)
ಮೈಸೂರು : ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ, ಸೆ.26 ರಂದು ನಡೆಯಲಿರುವ ದಸರಾ ಮಹೋತ್ಸವವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ.
ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕು ಎಂದು ಚರ್ಚೆ ನಡೆಯುತ್ತಿದ್ದಾಗ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಷ್ಟ್ರಪತಿಗಳೂ ಬರಲು ಒಪ್ಪಿಕೊಂಡಿದ್ದಾರೆ. ಅವರಿಂದಲೇ ದಸರಾ ಉದ್ಘಾಟನೆಯಾಗಲಿದೆ ಎಂದು ಹೇಳಿದ್ದಾರೆ.