ಪ್ರಾಥಮಿಕ ಮಾಹಿತಿಗಳ ಪ್ರಕಾರ ಈ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಸುಲಭವಾಗಿ ಹರಡುವ ಸಾಮರ್ಥ್ಯ ಹೊಂದಿಲ್ಲ. ಜೊತೆಗೆ ವೈರಸ್ ನಿಂದ ಹರಡುವಿಕೆಯಲ್ಲಿ ಅಪಾಯದ ಪ್ರಮಾಣವೂ ಕಡಿಮೆ ಎಂದು ಪರಿಗಣಿಸಲಾಗಿದೆ.
ನ್ಯೂಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ 56ರ ಮಹಿಳೆ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾದ ಒಂದು ತಿಂಗಳ ನಂತರ ಅವರು ನಿಧನರಾದರು. ಈ ಕುರಿತು ಮಾಹಿತಿ ಪಡೆದ ನಂತರ ವಿಶ್ವ ಆರೋಗ್ಯ ಸಂಸ್ಥೆ ಕೋಳಿಗೆ ತಗುಲುವ ರೋಗಲಕ್ಷಣಗಳು (ಹಕ್ಕಿಜ್ವರದ ಲಕ್ಷಣಗಳು) ಮಹಿಳೆಯಲ್ಲಿ ಕಂಡುಬಂದಿದೆ ಎಂದು ಹೇಳಿದೆ.
ಮುನ್ನೆಚ್ಚರಿಕೆ ಕ್ರಮಗಳೇನು?
* ಯಾವುದೇ ವಸ್ತುವನ್ನು ಮುಟ್ಟುವ ಮುನ್ನ ಕೈಗಳನ್ನು ಶುಚಿಯಾಗಿ ತೊಳೆದುಕೊಳ್ಳಬೇಕು.
* ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಅನ್ನು ಬಳಸಬೇಕು.
* ಮಾರುಕಟ್ಟೆ, ಫಾರ್ಮ್, ಪೌಲ್ಟ್ರಿಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು.