Daily Horoscope
✕

ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್

Webdunia
ಸೋಮವಾರ, 13 ಸೆಪ್ಟಂಬರ್ 2021 (10:20 IST)
ಬೆಂಗಳೂರು, ಸೆ 13 :  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಉಷ್ಣಾಂಶ 22 ಡಿಗ್ರಿಗೆ ಕುಸಿದಿದೆ. ನಗರದಲ್ಲಿ ಭಾನುವಾರ ಸಂಜೆ ವೇಳೆಗೆ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ. ತಂಪಾದ ಗಾಳಿ ಬೀಸುತ್ತಿದ್ದು, ಆಗಾಗ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments