Publish Date: Fri, 01 Sep 2023 (07:30 IST)
Updated Date: Fri, 01 Sep 2023 (10:11 IST)
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನ ನೂತನ ಸದಸ್ಯರಾಗಿ ನಾಮ ನಿರ್ದೇಶನ ಗೊಂಡಿರುವ ಮಾಜಿ ಸಚಿವರಾದ ಎಂ.ಆರ್ ಸೀತಾರಾಂ, ಉಮಾಶ್ರೀ ಹಾಗೂ ಮುಖಂಡ ಹೆಚ್.ಪಿ ಸುದಾಮ್ ದಾಸ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಭಾಪತಿ ಹೊರಟ್ಟಿ ನೂತನ ಸದಸ್ಯರಿಗೆ ಸಂಪ್ರದಾಯದಂತೆ ವಿಧಾನಪರಿಷತ್ತಿನ ನಡಾವಳಿ ಪುಸ್ತಕ ಒಳಗೊಂಡ ಸೂಟ್ ಕೇಸ್ ನೀಡಿ ಶುಭ ಹಾರೈಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸದಸ್ಯರಿಗೆ ಹೂಗುಚ್ಚ ನೀಡಿ ಸಿಹಿ ತಿನ್ನಿಸಿ ಶುಭಾಶಯ ಕೋರಿದರು.