Publish Date: Mon, 17 Oct 2022 (07:05 IST)
Updated Date: Mon, 17 Oct 2022 (09:24 IST)
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರ ವರೆಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ದಕ್ಷಿಣ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.