ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

Webdunia
ಬುಧವಾರ, 13 ಅಕ್ಟೋಬರ್ 2021 (08:11 IST)
ಬೆಂಗಳೂರು(ಅ.13):ಮುಂಗಾರು ಅಂತ್ಯವಾಗಲು ಶುರುವಾಗಿ ಬಹಳ ದಿನಗಳಾಗಿದೆ, ಆದರೆ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಒಂದೆಡೆ ವಾಯುಭಾರ ಕುಸಿತ ಹಾಗೂ ಮತ್ತೊಂದೆಡೆ ಜವಾಬ್ ಚಂಡಮಾರುತ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಸಹ ಕಳೆದ ಮಳೆಯಾಗುತ್ತಿದೆ.

ಇನ್ನು ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿರುವುದರಿಂದ ಅ.13 ರಿಂದ 15ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಂಡಮಾನ್ ಸಮುದ್ರದ ಉತ್ತರ ಭಾಗದಲ್ಲಿ ಚಂಡಮಾರುತ ಪರಿಚಲನೆಯಿದೆ. ಇದರ ಪ್ರಭಾವ, ವಾಯುಭಾರ ಕುಸಿತ ಉಂಟಾಗಿದ್ದು ಜೊತೆಗೆ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ  ಮೂರ್ನಾಲ್ಕು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇಂದು ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.  ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments