Publish Date: Sat, 16 Apr 2022 (07:18 IST)
Updated Date: Sat, 16 Apr 2022 (11:20 IST)
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್ ಹಾಗೂ ಯಾದಗಿರಿ ಹೊರತುಪಡಿಸಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆ ಗುಡುಗು-ಸಿಡಿಲು ಸಹಿತ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಕಳೆದ 2 ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದು ಕೂಡಾ ಸಂಜೆ ವೇಳೆ ಭಾರೀ ಮಳೆ ಹಾಗೂ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ.