Publish Date: Sat, 13 May 2023 (07:48 IST)
Updated Date: Sat, 13 May 2023 (08:28 IST)
ಬೆಂಗಳೂರು : ತೀವ್ರ ಕುತೂಹಲಕ್ಕೆ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜನಾದೇಶ ಇಂದು ಹೊರಬಿಳಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಶುರುವಾಗಲಿದೆ. 224 ಕ್ಷೇತ್ರಗಳ ಒಟ್ಟು 2,631 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ ಆಗಲಿದೆ.
ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್ಗಳು ಮತಕೇಂದ್ರಗಳತ್ತ ಬರುತ್ತಿದ್ದಾರೆ.
ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಯಾರಿಗೆ ಅಧಿಕಾರ ಎನ್ನುವುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.