Select Your Language

Notifications

webdunia
webdunia
webdunia
webdunia

ಇಂದು 3ನೇ ಹಂತದ ಮತದಾನ

ಇಂದು 3ನೇ ಹಂತದ ಮತದಾನ
ನವದೆಹಲಿ , ಭಾನುವಾರ, 20 ಫೆಬ್ರವರಿ 2022 (08:31 IST)
ನವದೆಹಲಿ : ಉತ್ತರ ಪ್ರದೇಶದ 16 ಜಿಲ್ಲೆಗಳ 59 ಕ್ಷೇತ್ರಗಳಿಗೆ ಇಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ.
 
ಕಾಂಗ್ರೆಸ್ ಆಡಳಿತವಿರುವ ಪಂಜಾಬ್ನಲ್ಲೂ ಇಂದು ಒಂದೇ ಹಂತದಲ್ಲಿ ಮತದಾನವಾಗಲಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ನಡೆಯಲಿದೆ.

ಉತ್ತರಪ್ರದೇಶದ ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್ಪುರಿ, ಫರೂಕಾಬಾದ್, ಕನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್, ಜಲೌನ್, ಝಾನ್ಸಿ, ಲಲಿತ್ಪುರ, ಹಮೀರ್ಪುರ್ ಮತ್ತು ಮಹೋಬಾ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.

ಈಗಾಗಲೇ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಸಹೋದರ ಅಭಯ್ ರಾಮ್ ಯಾದವ್ ಇಟಾವಾ ಜಿಲ್ಲೆಯ ಸೈಫೈನಲ್ಲಿ ಈಗಾಗಲೇ ಮತ ಚಲಾಯಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲು!