ಇಂದು, ನಾಳೆಯೂ ಮುಂದುವರಿಯಲಿದೆ ಮಳೆ!

Webdunia
ಶನಿವಾರ, 20 ನವೆಂಬರ್ 2021 (13:25 IST)
ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ  ವೈಪರಿತ್ಯ ಹಿನ್ನೆಲೆ ಬೆಂಗಳೂರು ಸೇರಿದಂತೆ ಮುಂದಿನ ಎರಡು ದಿನಗಳ ಕಾಲ ಮಳೆ  ಮುಂದುವರಿಯಲಿದೆ.
ಬೆಂಗಳೂರಿಗೆ ಜಿಟಿ ಜಿಟಿ ಮಳೆ ತಪ್ಪಿದಲ್ಲ. ಇನ್ನುಳಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ. ಇತ್ತ ರಾಜ್ಯದ ಬಹುತೇಕ ಕೆರೆಗಳು  ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ.  ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ  ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ 13 ಜಿಲ್ಲೆಗಳಿಗೆ ಅಲರ್ಟ್  ಸಂದೇಶ ರವಾನಿಸಲಾಗಿದ್ದು, ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.
ರಾಜ್ಯದ ಕರಾವಳಿ  ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಅಬ್ಬರ ಮುಂದುವರಿಯಲಿದೆ.  ಶನಿವಾರದವರೆಗು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ  ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments