Webdunia - Bharat's app for daily news and videos

Install App

ನಾಳೆ ಸೂರ್ಯಗ್ರಹಣ ; ಎಷ್ಟು ಗಂಟೆಗೆ ಗ್ರಹಣ?

Webdunia
ಶುಕ್ರವಾರ, 3 ಡಿಸೆಂಬರ್ 2021 (11:58 IST)
ಅಮಾವಾಸ್ಯೆಯ ದಿನ ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬ೦ದಾಗ ಸೂರ್ಯ ಗ್ರಹಣ ಸ೦ಭವಿಸುತ್ತದೆ.
ಈ ವರ್ಷದ ಎರಡನೇ ಸೂರ್ಯಗ್ರಹಣ ಮತ್ತು 2021ರ ಕೊನೆಯ ಸೂರ್ಯಗ್ರಹಣವು ಶನಿವಾರ, ಡಿಸೆಂಬರ್ 4 ರಂದು ಸಂಭವಿಸಲಿದೆ. ಸುಮಾರು 4 ಗಂಟೆಗಳ ಕಾಲ ಇರಲಿದೆ. ಸೂರ್ಯಗ್ರಹಣವು ಬೆಳಿಗ್ಗೆ 10:59 ರಿಂದ ಪ್ರಾರಂಭವಾಗುತ್ತದೆ ಮತ್ತು ಮಧ್ಯಾಹ್ನ 3:7 ಕ್ಕೆ ಕೊನೆಗೊಳ್ಳುತ್ತದೆ.
ಈ ಸೂರ್ಯಗ್ರಹಣವು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೇರಿಕಾ, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ಜಗತ್ತಿನ ಕೆಲವು ಭಾಗಗಳಿಗೆ ಗೋಚರವಾಗಲಿದೆ. ಭೂಮಿಯ ಮೇಲ್ಮೈಯಲ್ಲಿ ಸೂರ್ಯಗ್ರಹಣದ ಹಾದಿಯನ್ನು ಪತ್ತೆಹಚ್ಚುವ ನಕ್ಷೆಯನ್ನು ನಾಸಾ ಬಿಡುಗಡೆ ಮಾಡಿದ್ದು, ಇದರ ಆಧಾರದಲ್ಲಿ ಡಿಸೆಂಬರ್ 4 ರ ಸೂರ್ಯಗ್ರಹಣವು ಭಾರತದಿಂದ ಗೋಚರಿಸುವುದಿಲ್ಲ.
2021 ರ ಕೊನೆಯ ಸೂರ್ಯಗ್ರಹಣವು ಈ ಮೊದಲು ಅಂದರೆ ಇದೇ ವರ್ಷ ಜೂನ್ 10 ರಂದು ಸಂಭವಿಸಿದ ಮಾದರಿಯಲ್ಲಿಯೇ ಇರಲಿದೆ. ಬೆಳಿಗ್ಗೆ 10.59ಕ್ಕೆ ಪ್ರಾರಂಭವಾಗುತ್ತದೆ. ಮಧ್ಯಾಹ್ನ 12:30 ಕ್ಕೆ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗುತ್ತದೆ. 01:03 ಕ್ಕೆ ಗರಿಷ್ಠವಾಗಿರುತ್ತದೆ ಮತ್ತು 01:36 ಕ್ಕೆ ಕೊನೆಗೊಳ್ಳುತ್ತದೆ. ಅಂತಿಮವಾಗಿ 3.07ಕ್ಕೆ ಮುಕ್ತಾಯವಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments