Select Your Language

Notifications

webdunia
webdunia
webdunia
webdunia

ದುರಂತ : ಸಾವಿನ ಸಂಖ್ಯೆ 132ಕ್ಕೆ ಏರಿಕೆ!

ದುರಂತ : ಸಾವಿನ ಸಂಖ್ಯೆ 132ಕ್ಕೆ ಏರಿಕೆ!
ಅಹಮದಾಬಾದ್ , ಸೋಮವಾರ, 31 ಅಕ್ಟೋಬರ್ 2022 (10:30 IST)
ಅಹಮದಾಬಾದ್ : ಗುಜರಾತ್ನ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದಲ್ಲಿ 132 ಮಂದಿ ಬಲಿಯಾಗಿದ್ದಾರೆ.

ಮಚ್ಚು ನದಿಗೆ ನಿರ್ಮಿಸಿರುವ ಮೊರ್ಬಿ ತೂಗು ಸೇತುವೆ ನಿನ್ನೆ ಕುಸಿದು ಬಿದ್ದು ದುರಂತ ಸಂಭವಿಸಿದೆ. ನಾಪತ್ತೆಯಾದವರಿಗಾಗಿ, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಎನ್ಡಿಆರ್ಎಫ್, ವಾಯುಪಡೆ, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ.

ದೋಣಿ, ಬೋಟ್ಗಳ ಸಹಾಯದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಈಗಾಗಲೇ 177ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ.

140ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಈ ತೂಗು ಸೇತುವೆ ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೇಬಲ್ಗಳ ಸಹಾಯದಿಂದ ಬ್ರಿಟಿಷರು ನಿರ್ಮಿಸಿರುವ ಅತಿ ಉದ್ದದ ತೂಗು ಸೇತುವೆ ಇದಾಗಿದೆ.

ನಿನ್ನೆ ರಜೆ ದಿನದ ಹಿನ್ನೆಲೆ ಈ ಪ್ರದೇಶದಲ್ಲಿ ಜನ ದಟ್ಟನೆ ಇತ್ತು. ನೂರು ಜನರ ಸಾಮರ್ಥ್ಯಯುಳ್ಳ ಸೇತುವೆ ಮೇಲೆ ಐದು ನೂರಕ್ಕೂ ಅಧಿಕ ಮಂದಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೇಬಲ್ ಕಟ್ ಆಗಿ ಧರಗೆ ಉರುಳಿದೆ ಎನ್ನಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸೇನೆಯನ್ನು ಬಲಪಡಿಸುವುದೇ ನಮ್ಮ ಉದ್ದೇಶ : ಇಮ್ರಾನ್