Select Your Language

Notifications

webdunia
webdunia
webdunia
webdunia

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ!
ಬೆಂಗಳೂರು , ಶನಿವಾರ, 18 ಸೆಪ್ಟಂಬರ್ 2021 (13:40 IST)
ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ದೀರ್ಘಾವಧಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್ 20 ರಿಂದ ಧರಣಿ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

2021 ರ ಏಪ್ರಿಲ್ ನಲ್ಲಿ ನಡೆದ ಮುಷ್ಕರದ ವೇಳೆ ಸೇವೆಯಿಂದ ವಜಾ ಮಾಡಿರುವ ಎಲ್ಲ ಕಾರ್ಮಿಕರನ್ನು ಕೆಲಸಕ್ಕೆ ಪುನರ್ ನೇಮಿಸಬೇಕು. ವಿಭಾಗದಿಂದ ವಿಭಾಗಗಕ್ಕೆ ವರ್ಗಾವಣೆ ಮಾಡಿರುವ ನೌಕರರನ್ನು ತೆರವು ಮಾಡಬೇಕು. ಮುಷ್ಕರದ ಅವಧಿಯಲ್ಲಿ ಕಾರ್ಮಿಕರಿಗೆ ನೀಡಲಾಗಿರುವ ಅಪಾದನಾ ಪತ್ರವನ್ನು ರದ್ದುಪಡಿಸುವ ಕುರಿತಂತೆ ಹಲವು ಬೇಡಿಕೆಗಳನ್ನು ಈಡೇರಿಕೆಗಾಗಿ ಸೆ.20 ರಂದು ಸಾರಿಗೆ ನೌಕರರ ಧರಣಿ ನಡೆಯಲಿದೆ.
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಸೆಪ್ಟೆಂಬರ್ 20 ರಂದು ಧರಣಿ ನಡೆಸಲು ನಿರ್ಧರಿಸಲಾಗಿದ್ದು, ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಧರಣಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಸೋಮವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್, ಹವಾಮಾನ ಬದಲಾವಣೆ ಬಗ್ಗೆ ಚರ್ಚೆಗೆ ಬೈಡನ್ ಆದ್ಯತೆ